ಗಂಭೀರ್ ಬೆನ್ನಲ್ಲೇ ಚುನಾವಣೆಯಿಂದ ಹಿಂದೆ ಸರಿದ ಜಯಂತ್ ಸಿನ್ಹಾ

Prasthutha|

ನವದೆಹಲಿ: ಮಾಜಿ ಕೇಂದ್ರ ಸಚಿವ ಮತ್ತು ಹಜಾರಿಬಾಗ್‌ನ ಬಿಜೆಪಿ ಸಂಸದ ಜಯಂತ್ ಸಿನ್ಹಾ ಚುನಾವಣಾ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಕೇಳಿಕೊಂಡಿದ್ದಾರೆ.

- Advertisement -

ನನ್ನ ನೇರ ಚುನಾವಣಾ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ನಾನು ಜೆಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ, ಇದರಿಂದಾಗಿ ನಾನು ಭಾರತ ಮತ್ತು ಪ್ರಪಂಚದಾದ್ಯಂತ ಜಾಗತಿಕ ಹವಾಮಾನ ಬದಲಾವಣೆಯನ್ನು ಎದುರಿಸಲು ನನ್ನ ಪ್ರಯತ್ನಗಳನ್ನು ಕೇಂದ್ರೀಕರಿಸುತ್ತೇನೆ. ನಾನು ಆರ್ಥಿಕ ಮತ್ತು ಆಡಳಿತ ವಿಷಯಗಳಲ್ಲಿ ಪಕ್ಷದೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಜಯಂತ್ ಸಿನ್ಹಾ ಹೇಳಿದ್ದಾರೆ.

ಸಿನ್ಹಾ ಈ ಹಿಂದೆ ನರೇಂದ್ರ ಮೋದಿ ಅವರ ಕ್ಯಾಬಿನೆಟ್‌ನಲ್ಲಿ ಹಣಕಾಸು ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಹತ್ತು ವರ್ಷಗಳಿಂದ ಭಾರತ್ ಮತ್ತು ಹಜಾರಿಬಾಗ್‌ನ ಜನರಿಗೆ ಸೇವೆ ಸಲ್ಲಿಸುವ ಭಾಗ್ಯ ನನಗೆ ಸಿಕ್ಕಿದೆ. ತಮಗೆ ಒದಗಿಸಿದ ಅವಕಾಶಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞ ಎಂದು ಅವರು ಹೇಳಿದ್ದಾರೆ.

Join Whatsapp