ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

Prasthutha|

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದರು.

- Advertisement -

ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾಜ್೯, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ ಅಂಶುಮತ್, ಮೊಟ್ಟಮ್ಮ ಹಾಜರಿದ್ದರು.



Join Whatsapp