ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿ ಸಲ್ಲಿಸಿದರು.
2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯನ್ನು ಮಾಡಿಸಲಾಗಿತ್ತು. ಆದ್ರೆ ಕಾರಣಂತರಗಳಿಂದ ಸರ್ಕಾರ ವರದಿ ಸ್ವೀಕರಿಸಿರಲಿಲ್ಲ. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಅದರಂತೆ ಸಿದ್ದರಾಮಯ್ಯನವರು ಹಲವರ ವಿರೋಧದ ನಡುವೆಯೂ ವರದಿಯನ್ನು ಸ್ವೀಕಾರ ಮಾಡಿದ್ದಾರೆ.