ಮಂಗಳೂರು ಮೂಲದ ಜಯೇಶ್ ಪೂಜಾರಿಯಿಂದ ಕೋರ್ಟ್’ನಲ್ಲೇ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ

Prasthutha|

ಬೆಳಗಾವಿ: ಮಂಗಳೂರು ಮೂಲದ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.

- Advertisement -


ಧರ್ಮದೇಟು ಬೀಳುತ್ತಿದ್ದಂತೆ ಪಾತಕಿ ಜಯೇಶ್ ಪೂಜಾರಿಯನ್ನು ರಕ್ಷಣೆ ಮಾಡಿ ಪೊಲೀಸರು ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋದರು. ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ಜಯೇಶ್ ಪೂಜಾರಿಯನ್ನು ಪೊಲೀಸರು ಇಂದು (ಜೂ.12) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತ ಆರೋಪಿ ಜಯೇಶ್ ಪೂಜಾರಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು ತಿದುಬಂದಿದೆ.


ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಕಳೆದ ವರ್ಷ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಿದ್ದನು. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಿದ್ದನು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ಕರಣದ ತನಿಖೆ ನಡೆಸಿದ್ದರು. ಆರೋಪಿ ಜಯೇಶ್ ಪೂಜಾರಿ ಮೂಲತಃ ಮಂಗಳೂರಿನ ಪುತ್ತೂರಿನವನಾಗಿದ್ದು ಮುಂಬೈನಲ್ಲಿದ್ದು ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.

Join Whatsapp
Exit mobile version