Home ಟಾಪ್ ಸುದ್ದಿಗಳು ಬಿಜೆಪಿ-ಜೆಡಿಎಸ್ ಮೈತ್ರಿ: ಕುಮಾರಸ್ವಾಮಿ ವಿರುದ್ಧ ಸಿಎಂ ಇಬ್ರಾಹಿಂ ಅಸಮಾಧಾನ

ಬಿಜೆಪಿ-ಜೆಡಿಎಸ್ ಮೈತ್ರಿ: ಕುಮಾರಸ್ವಾಮಿ ವಿರುದ್ಧ ಸಿಎಂ ಇಬ್ರಾಹಿಂ ಅಸಮಾಧಾನ

ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಇದೇ ಮೊದಲ ಬಾರಿಗೆ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮೌನಮುರಿದಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಚಾರವಾಗಿ ಅಕ್ಟೋಬರ್ 16 ರಂದು ಮಾತಾಡಬೇಕು ಎಂಬ ನಿರ್ಧಾರ ಮಾಡಿದ್ದೆ. ಅಲ್ಲಿವರೆಗೆ ಅವಕಾಶ ಕೊಡಿ. ಎಲ್ಲರ ಅಭಿಪ್ರಾಯ ಪಡೆದು ಕನ್ನಡ ಮಾಧ್ಯಮಗಳ ಜೊತೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ. ರಾಜ್ಯದ ವಿಷಯಗಳ ಬಗ್ಗೆ ಈಗಾಗಲೇ ಹೆಚ್ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ ಎಂದಿರುವ ಅವರು, ನಾನೊಂದು ಪಕ್ಷದ ಅಧ್ಯಕ್ಷ. ನೀವು ದೆಹಲಿಗೆ ಹೋದಿರಿ, ನನಗೆ ಒಂದು ಮಾತು ಹೇಳಿಲ್ಲ. ಏನು ಚರ್ಚೆ ಮಾಡಿದ್ದೀರಿ, ಈವರೆಗೆ ಮಾಹಿತಿ ಬಂದಿಲ್ಲ. ಮೈತ್ರಿ ಎಲ್ಲಿ ಆಗಿದೆ? ನಾನು ಪಕ್ಷದ ಅಧ್ಯಕ್ಷ, ಪಕ್ಷದಲ್ಲಿ ಎಲ್ಲಿ ಚರ್ಚೆ ಆಗಿದೆ? ಜನತಾದಳದ ಮೂಲ ಮತಗಳು ಈ ಬಾರಿ ಕಾಂಗ್ರೆಸ್ ಗೆ ಹೋಗಿದೆ. ಅದನ್ನು ಒಪ್ಪಲು ತಯಾರಿಲ್ಲ, ಅದನ್ನು ಒಪ್ಪಿಕೊಳ್ಳಿ. ಪಕ್ಷದಲ್ಲಿ ಚರ್ಚೆ ಆಗಿ ನಿರ್ಣಯ ಆದ ಮೇಲೆ ರಾಜ್ಯಾಧ್ಯಕ್ಷನಾಗಿ ನಾನು ಸಹಿ ಹಾಕಬೇಕು. ಕೋರ್ ಕಮಿಟಿ ಪ್ರವಾಸ ಶುರು ಮಾಡಿಲ್ಲ, ಆಗಲೇ ಹೋಗಿ ಭೇಟಿ ಮಾಡಿ ಬಂದಿದ್ದಾರೆ ಎಂದು ಕುಮಾರಸ್ವಾಮಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

Join Whatsapp
Exit mobile version