Home ಟಾಪ್ ಸುದ್ದಿಗಳು ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್-ಬಿಜೆಪಿ ಹೊಂದಾಣಿಕೆ: ಕಾಂಗ್ರೆಸ್

ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್-ಬಿಜೆಪಿ ಹೊಂದಾಣಿಕೆ: ಕಾಂಗ್ರೆಸ್

ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಾಲೆಳೆದಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು ‘ಕುರುಡನ ಹೆಗಲ ಮೇಲೆ ಕುಂಟನ ಸವಾರಿ’ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ನಾಯಕತ್ವವಿಲ್ಲದ ಬಿಜೆಪಿ, ಜೆಡಿಎಸ್ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ. ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ? ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ. ಥೇಟ್ ನಾಗವಲ್ಲಿಯ ತರ ಎಂದು ಜೆಡಿಎಸ್ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

Join Whatsapp
Exit mobile version