ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್

Prasthutha: June 15, 2021

ಬೆಂಗಳೂರು :  ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ  ಕ್ಷೇತ್ರದ ಉಪಚುನಾವಣೆಗೆ ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

ನಿಯಾಜ್ ಶೇಖ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಪಕ್ಷದ ಬಾವುಟ ನೀಡಿ ನಿಯಾಜ್ ಶೇಖ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಯ್ಯದ್ ಅಲ್ತಾï ಉಪಸ್ಥಿತರಿದ್ದರು. ನಿಯಾಜ್ ಶೇಖ್ ಅವರು ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಕಳೆದ ವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಲಿ ಹಾನಗಲ್ ವಿಧಾನಸಬಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ.ಉದಾಸಿ  ಅವರು ನಿಧಾನರಾದ ಹಿನ್ನೆಲೆಯಲ್ಲಿ  ತೆರವಾಗಿರುವ ಈ ಕ್ಷೇತ್ರಕ್ಕೆ ಉಪಚುನಾವಣೆ ಸದ್ಯದಲ್ಲೇ ನಡೆಯಲಿದ್ದು, ಜೆಡಿಎಸ್‍ನಿಂದ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!