ಚಾಮರಾಜನಗರ: ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿಗೆ ಆಮಿಷ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.
ಚಾಮರಾಜನಗರದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಿಂದ ದೂರು ಹಿನ್ನೆಲೆ ವಿ.ಸೋಮಣ್ಣ, ನಟರಾಜ್, ಸುದೀಪ್ ವಿರುದ್ಧ ಐಪಿಸಿ ಸೆಕ್ಷನ್ 1860(u/s 171E, 171F) ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ.
ಇತ್ತೀಚೆಗೆ ಜೆಡಿಎಸ್ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನಾಮಪತ್ರ ವಾಪಸ್ ಪಡೆದುಕೊಳ್ಳಲು ಸೋಮಣ್ಣ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದು, ರಾಜಕೀಯ ವಲಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು.