ಮದ್ದೂರು: ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಹಲವು ಷಡ್ಯಂತ್ರ ಮಾಡುತ್ತಿದ್ದಾರೆ. ನಾನು ಜೀವಂತವಾಗಿ ಇರುವವರೆಗೂ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಅವರ ‘ಅಪರೂಪ’ ಅಭಿನಂದನಾ ಗ್ರಂಥಬಿಡುಗಡೆ ಮಾಡಿ ಅವರು ಮಾತನಾಡಿದರು. 1967ರಲ್ಲಿ ನಾನು ವಿಧಾನಸಭೆಗೆ ಬಂದೆ, ಅಂದಿನಿಂದ ಇಲ್ಲಿಯವರೆಗೂ ಹೋರಾಟದಲ್ಲೇ ಕಳೆದಿದ್ದೇನೆ. 10 ತಿಂಗಳು ಪ್ರಧಾನಿ, ಮುಖ್ಯಮಂತ್ರಿ, ನೀರಾವರಿ ಮಂತ್ರಿಯಾಗಿ 2 ಬಾರಿ ರಾಜೀನಾಮೆ ನೀಡಿದ್ದೇನೆ. ಯಾರು ಎಷ್ಟೇ ಪ್ರಯತ್ನಿಸಿದರೂ ನನ್ನ ಹೋರಾಟದ ಬದುಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ನನ್ನ ಹೋರಾಟ ನಿರಂತರವಾಗಿ ನಡೆಯಲಿದೆ’ ಎಂದರು. ಎಚ್.ಡಿ.ಕುಮಾರಸ್ವಾಮಿ ಹಾಗೂ ನನನ್ನು ರಾಜಕೀಯವಾಗಿ ಮುಗಿಸಲು ಹಲವರು ಪ್ರಯತ್ನ ನಡೆಸಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.