ಸಚಿವ ಝಮೀರ್ ರಾಜ್ಯದ ಜನತೆಗೆ ಕ್ಷಮೆ ಕೇಳಿ, ರಾಜೀನಾಮೆ ನೀಡಬೇಕು: ಜೆಡಿಎಸ್ ಆಗ್ರಹ

Prasthutha|

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಣ್ಣದ ಬಗ್ಗೆ ಮಾತನಾಡಿದ್ದ ಸಚಿವ ಝಮೀರ್ ಅಹ್ಮದ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಝಮೀರ್ ಅಹ್ಮದ್ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

- Advertisement -

ಜಮೀರ್ ಅಹ್ಮದ್ ಅವರೇ, ಹೆಚ್.ಡಿ ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ. ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ.

ಸರ್ವಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ನೀವು ಕ್ಷುಲ್ಲಕ ರಾಜಕೀಯಕ್ಕಾಗಿ ದ್ವೇಷ ಹರಡಲು, ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದೀರಿ. ನೆನಪಿರಲಿ, ಇಲ್ಲಿ ನಿಮ್ಮ ಒಡೆದು ಆಳುವ ನೀತಿಗೆ ಜಾಗವಿಲ್ಲ. ಜನಾಂಗೀಯ ನಿಂದನೆ, ವರ್ಣಭೇದ ಹೇಳಿಕೆಗಳನ್ನು ನೀಡಿ ಅಪಮಾನ ಎಸಗಿರುವ ನೀವು ನಾಡಿನ ಜನರಲ್ಲಿ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.



Join Whatsapp