ಪ್ರಜ್ವಲ್ ರೇವಣ್ಣ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು

Prasthutha|

ಬೆಂಗಳೂರು: ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ ವಿಡಿಯೊ ಮಾಡಿದ್ದಾರೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು ನೀಡಿದೆ.

- Advertisement -

ರಾಯಚೂರು ಹಾಗೂ ಶಿವಮೊಗ್ಗದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಇದನ್ನು ಉಲ್ಲೇಖಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮತ್ತು ರಾಯಚೂರು ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಜೆಡಿಎಸ್ ನಾಯಕ ಎಚ್.ಎಂ ರಮೇಶ್ ಗೌಡ ದೂರು ನೀಡಿದ್ದಾರೆ.

Join Whatsapp