ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನನಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಜಿಲ್ಲೆಯ ಚೇಳೂರು ಬ್ರಾಹ್ಮಣರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನಗೆ ಬಿಜೆಪಿ ನಾಯಕರು ಟಿಕೆಟ್ ನೀಡುವ ವಿಶ್ವಾಸವಿದೆ. ಹಾಗೆಯೇ ಕುಮಾರಸ್ವಾಮಿ ಹಾಗೂ ಹೆಚ್ ಡಿ ದೇವೇಗೌಡರು ಸಹ ಹಸಿರು ನಿಶಾನೆ ತೋರಿದ್ದು ಕೆಲಸ ಪ್ರಾರಂಭ ಮಾಡಲು ತಿಳಿಸಿದ್ದಾರೆ ಎಂದಿದ್ದಾರೆ.ನಿಮಗೆಲ್ಲಾ ಸುಧಾಕರ್ ಅಂದ್ರೆ ಅಭಿವೃದ್ಧಿ ಅಭಿವೃದ್ಧಿ ಅಂದ್ರೆ ಸುಧಾಕರ್ ಎನ್ನುವುದು ಗೊತ್ತಿದೆ. ನಾನು ಸಂಸದನಾದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಮಾಡಲಿದ್ದೇನೆ. ಕೃಷಿ, ನೀರಾವರಿ, ಕೈಗಾರಿಕೆಗಳ ಸ್ಥಾಪನೆ, ಯುವಕರಿಗೆ ಉದ್ಯೋಗ ಕೊಡಿಸವ ಮೂಲಕ ಅಭಿವೃದ್ಧಿ ಏನು ಅಂತ ತೋರಿಸಲಿದ್ದೇನೆ. ಹಾಗಾಗಿ ನಾನು ದೇವ ಮೂಲೆ ಚಾಕ್ ವೇಲ್ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ ಎಂದು ನುಡಿದ್ದಾರೆ.