ಅಧಿಕಾರಕ್ಕಾಗಿ ಜೆಡಿಎಸ್ ಯಾರ ಮನೆ ಬಾಗಿಲನ್ನೂ ಬಡಿದಿಲ್ಲ, ಮುಂದೆ ಬಡಿಯುವುದೂ ಇಲ್ಲ: HDK

Prasthutha|

ರಾಷ್ಟ್ರೀಯ ಪಕ್ಷಗಳು ಆತಂತ್ರವಾದಾಗ ನಮ್ಮ ಮನೆ ಬಾಗಿಲು ಬಡಿದ್ದಾರೆ ಎಂದು ಬೊಮ್ಮಾಯಿಗೆ ಟಾಂಗ್ ನೀಡಿದ ಮಾಜಿ ಮುಖ್ಯಮಂತ್ರಿ

- Advertisement -

ಬೆಂಗಳೂರು: ಯಾವುದೇ ಕಾರಣಕ್ಕೂ ರಾಷ್ಟ್ರೀಯ  ಪಕ್ಷಗಳ ಮನೆ ಬಾಗಿಲಿಗೆ ಅಧಿಕಾರಕ್ಕಾಗಿ ಈವರೆಗೆ  ಹೋಗಿಲ್ಲ. ಇನ್ನು ಮುಂದೆಯೂ ಹೋಗುವುದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಪಕ್ಷದ ನೂತನ ಕೋರ್ ಕಮಿಟಿ ಸಭೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಅತಂತ್ರ ವಿಧಾನಸಭೆ ನಿರ್ಮಾಣವಾದಾಗ ರಾಷ್ಟ್ರೀಯ ಪಕ್ಷಗಳು ನಮ್ಮ ಮನೆ ಬಾಗಿಲಿಗೆ ಬಂದಿವೆ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ‌ ಗುರಿ ತಲುಪಲು ಶ್ರಮಿಸುತ್ತೇವೆ ಎಂದರು.

- Advertisement -

ಬೇರೆ ಪಕ್ಷಗಳು ಅಂತಂತ್ರ ಆದಾಗ ಜೆಡಿಎಸ್ ಸ್ವತಂತ್ರವಾಗುತ್ತದೆ. ಅದು ಕುಮಾರಸ್ವಾಮಿ ಅವರ ಸದಾಶಯ ಆಗಿರಬಹುದು ಎಂದು‌ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದ್ದಾರೆ. ನಾವೆಂದೂ ಅತಂತ್ರರಾಗಿಲ್ಲ. ಅವರೇ ಅಂತಂತ್ರವಾದಾಗ ಜೆಡಿಎಸ್ ಬಾಗಿಲು ಬಡಿದಿದ್ದಾರೆ.‌ ಅವರ ಶಾಸಕರು, ಸಚಿವರು ಸಿದ್ದರಾಮಯ್ಯ ಸಂಪರ್ಕದಲ್ಲಿ ಇದ್ದಾರೆ ಎಂದರೆ, ಅಂಥವರಿಗೆ ಬಿಜೆಪಿ‌ ನಾಯಕರಲ್ಲೇ ಕಡಿವಾಣ ಹಾಕುವ ಸ್ಥಿತಿ ಇಲ್ಲ.‌ ಆದರೆ ಗೊಂದಲ ಸೃಷ್ಟಿ ಮಾಡುವುದಕ್ಕೆ ನಾವು ಎಲ್ಲೂ ಅವಕಾಶ ಕೊಟ್ಟಿಲ್ಲ.‌ ಅವರನ್ನು ಹದ್ದುಬಸ್ತಿನಲ್ಲಿ  ಇಟ್ಟುಕೊಳ್ಳಲಿಕ್ಕೆ ಬಿಜೆಪಿಗೆ ಆಗಿಲ್ಲ ಎಂದು ಹೇಳಿದ್ದಾರೆ.  

ಜೆಡಿಎಸ್ ಕೋರ್ ಕಮಿಟಿ ನೂತನ ಅಧ್ಯಕ್ಷ ಬಂಡೆಪ್ಪ ಖಾಶೆಂಪೂರ್ , ಶಾಸಕರಾದ ಮಂಜುನಾಥ್, ಕೃಷ್ಣಾರೆಡ್ಡಿ, ವಿಧಾನ‌ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



Join Whatsapp