JDS ಬ್ರಾಹ್ಮಣ್ಯದ ಪಕ್ಷ: ನಟ ಚೇತನ್

Prasthutha|

ಬೆಂಗಳೂರು: ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಚೇತನ್, ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ. ಈ ಹಿಂದೆ ಕುಮಾರಸ್ವಾಮಿ ಅವರು, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ ಎಂದು ಹೇಳಿದ್ದರು. ಮುಂದುವರೆದು ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು ಹೇಳಿಕೆ ನೀಡಿದ್ದರು.


ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ಎಂದಿದ್ದಾರೆ. ಹಾಗೇ ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ಹೇಳಿದ್ದಾರೆ.

Join Whatsapp