ಮೈತ್ರಿ ಫಿಕ್ಸ್: NDA ಮೈತ್ರಿ ಕೂಟಕ್ಕೆ ಜೆಡಿಎಸ್ ಸೇರ್ಪಡೆ

Prasthutha|

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆಯಿತು. ಅಮಿತ್ ಶಾ ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು.

- Advertisement -


ಇನ್ನು ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ.


ಗೊಂದಲವಿಲ್ಲದೆ ಮೈತ್ರಿ; ಕುಮಾರಸ್ವಾಮಿ
ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಪಕ್ಷಗಳು ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿಯಾಗಲಿದೆ ಎಂದು ಅವರು ಹೇಳಿದರು.

Join Whatsapp