ಎನ್‍ಡಿಎಗೆ‌ ಜೆಡಿಎಸ್ ಸೇರ್ಪಡೆ ಹಿನ್ನೆಲೆ: ಜೆಡಿಎಸ್ ವಕ್ತಾರೆ ಹುದ್ದೆಗೆ ಯು.ಟಿ. ಆಯಿಶ ರಾಜೀನಾಮೆ

Prasthutha|

ಬೆಂಗಳೂರು: ಯು.ಟಿ. ಆಯಿಶ ಫರ್ಝಾನ ಜಾತ್ಯತೀತ ಜನತಾದಳದ(JDS) ರಾಜ್ಯ ವಕ್ತಾರೆ ಹುದ್ದೆಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

ʼʼಕನ್ನಡ ನಾಡಿನ ಸಮೃದ್ಧಿ ಮತ್ತು ಜಾತ್ಯಾತೀತ ನಿಲುವುಗಳು ನನ್ನ ಜೀವನದ ಪ್ರಧಾನ ಆಶಯಗಳಾಗಿದ್ದು ಆ ನಿಟ್ಟಿನಲ್ಲಿ ಶ್ರಮಿಸುವ ಸಲುವಾಗಿ ನಾನು ತಮ್ಮ ಪಕ್ಷವನ್ನು ಸೇರಿದ್ದೆ. ಆದರೆ ಬದಲಾದ ಕಾಲಘಟ್ಟದಲ್ಲಿ ನನ್ನ ನಿಲುವುಗಳು ಮತ್ತು ಪಕ್ಷದ ನಿಲುವುಗಳಲ್ಲಿ ಹೊಂದಾಣಿಕೆಯಾಗದ ಕಾರಣ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗಿ ಜೆಡಿಎಸ್ ಪಕ್ಷ ನೀಡಿದ್ದ ರಾಜ್ಯ ವಕ್ತಾರೆ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆʼʼ ಎಂದು ಜೆಡಿಎಸ್‌ ನ ಮಾಧ್ಯಮ ಮುಖ್ಯಸ್ಥರಾಗಿರುವ ಶ್ರೀಕಂಠೇಗೌಡ ಅವರಿಗೆ ಆಯಿಶ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಮಾತುಕತೆ ನಡೆಸಿದ್ದು, ನಂತರ  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಒಕ್ಕೂಟಕ್ಕೆ ಜೆಡಿಎಸ್ ಸೇರ್ಪಡೆಗೊಂಡಿರುವುದಾಗಿ ಅಧಿಕೃತವಾಗಿ ಘೊಷಿಸಲಾಯಿತು.

Join Whatsapp