BJP ಕುಟುಂಬ ರಾಜಕಾರಣದ ಪಟ್ಟಿ ಕೊಟ್ಟ ಜೆಡಿಎಸ್ !

Prasthutha|

ಬೆಂಗಳೂರು: ಕುಟುಂಬ ರಾಜಕೀಯದ ಟೀಕೆ ಮಾಡಿದ ಬಿಜೆಪಿ ವಿರುದ್ಧ ಜೆಡಿಎಸ್ ಅದೇ ವಿಚಾರವಾಗಿ ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ಪಟ್ಟಿಯನ್ನು ಟ್ವೀಟ್ ಮಾಡಿದೆ.

- Advertisement -

ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ. ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ಟೀಕಿಸಿದೆ.

1 ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

- Advertisement -

2 ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ

3ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4 ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6 ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ?

7 ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ ಎಂದು ಜೆಡಿಎಸ್ ಟ್ವೀಟ್ ಮೂಲಕ ಟೀಕೆ ಮಾಡಿದೆ.

Join Whatsapp