ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದ್ದು, ಈ ವಿಚಾರವಾಗಿ ಜೆಡಿಎಸ್ ಶಾಸಕ, ದೂರುದಾರರೂ ಆಗಿರುವ ಎ.ಮಂಜು ಪ್ರತಿಕ್ರಿಯಿಸಿದ್ದು, ನಮ್ಮ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಹೇಳಿದ್ದಾರೆ.
ಹೈಕೋರ್ಟ್ ತೀರ್ಪನ್ನು ಸ್ವಾಗತಿಸುವೆ, ಖುಷಿ ಸಿಕ್ಕಿದೆ. ಸುಳ್ಳು ಮಾಹಿತಿ ನೀಡಿದ್ದರಿಂದ ಹೈಕೋರ್ಟ್ ಅವರನ್ನು ಅನರ್ಹಗೊಳಿಸಿದೆ ಎಂದು ಮಂಜು ತಿಳಿಸಿದ್ದಾರೆ.
ಅವರು ಸರಿಯಿದ್ದೇವೆ ಅನ್ನುವುದಾದರೆ ಕಾನೂನು ಹೋರಾಟ ಮಾಡಲಿ. ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟಮಾಡಿ ಸಮರ್ಥಿಸಿಕೊಳ್ಳಲಿ. ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದರೆ ಶಿಕ್ಷೆ ಅನುಭವಿಸಲಿ. ಯಾರೇ ಆದರೂ ಸರಿ, ಚುನಾವಣಾ ಆಯೋಗಕ್ಕೆ ಸರಿಯಾದ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ