ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ MLA ಶ್ರೀನಿವಾಸ್

Prasthutha|

ತುಮಕೂರು: ಗುಬ್ಬಿ ಕ್ಷೇತ್ರದ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -


ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜೀನಾಮೆ ಅಂಗೀಕಾರ ಆದ ಬಳಿಕ ಕಾಂಗ್ರೆಸ್ ಸೇರುತ್ತೇನೆ. ದೇವೇಗೌಡರು ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ದೇವೇಗೌಡರು, ಕುಮಾರಸ್ವಾಮಿ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ದೇವೇಗೌಡರು ಹೆಚ್ಚಿನ ಪ್ರೋತ್ಸಾಹ ಕೊಟ್ಟು ಮಗನಂತೆ ನೋಡಿಕೊಂಡರು. ಕುಮಾರಸ್ವಾಮಿ ಅವರು ಕೂಡ ಒಡಹುಟ್ಟಿದ ತಮ್ಮನ ಹಾಗೆ ನೋಡಿಕೊಂಡಿದ್ದಾರೆ. ಅದ್ಯಾವ ಸಂದರ್ಭಕ್ಕೋಸ್ಕರ ನನ್ನನ್ನು ಹೊರಹಾಕಿದ್ರೋ ಗೊತ್ತಿಲ್ಲ. ಆದರೂ ಇವತ್ತು ಭಾರವಾದ ಹೃದಯದಿಂದ, ನೋವಿನಿಂದ ಆ ಪಕ್ಷಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದರು.



Join Whatsapp