ಸಿಎಂ ಇಬ್ರಾಹಿಂರಿಂದ ಜೆಡಿಎಸ್ ರಾಷ್ಟ್ರೀಯ ಸಮಾವೇಶ!

Prasthutha|

ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಹಲವು ರಾಜ್ಯಾಧ್ಯಕ್ಷರು ಭಾಗಿ!

- Advertisement -

ಬೆಂಗಳೂರು: ದೇವೇಗೌಡರ ಕುಟುಂಬಕ್ಕೆ ಸೆಡ್ಡು ಹೊಡೆದು‌‌ ನಿಂತಿರುವ ಸಿಎಂ ಇಬ್ರಾಹಿಂ ಬೆಂಗಳೂರಿನಲ್ಲಿ ಡಿಸೆಂಬರ್ 11 ರಂದು ಜೆಡಿಎಸ್ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಸಂಬಂಧ ಮಾಹಿತಿ ನೀಡಿದ ಮಾಜಿ ಕೇಂದ್ರ ಸಚಿವ ಇಬ್ರಾಹಿಂ, ನಮ್ಮ ಅಜೆಂಡಾ ಜಾತ್ಯತೀತ ಪರ ನಿಲ್ಲುವುದಾಗಿದೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ ಸಭೆಯಲ್ಲಿ ದೇಶಾದ್ಯಂತ ಇರುವ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

ಗುಜರಾತ್, ಉತ್ತರ ಪ್ರದೇಶ, ಬಿಹಾರ, ತೆಲಂಗಾಣ, ಆಂಧ್ರಪ್ರದ , ಕೇರಳ, ರಾಜಸ್ಥಾನ ಮತ್ತು ದೇಶದಾದ್ಯಂತದ ರಾಜ್ಯಾಧ್ಯಕ್ಷರು, ಮುಖಂಡರು ಇಲ್ಲಿಗೆ ಬರುತ್ತಿದ್ದಾರೆ ಎಂದು ಇಬ್ರಾಹಿಂ ತಿಳಿಸಿದ್ದಾರೆ.



Join Whatsapp