ಮಾಂಸ ಸೇವಿಸಿ ದೇವಸ್ಥಾನಕ್ಕೆ ಹೋದ ಸಿ.ಟಿ.ರವಿ ವಿರುದ್ಧ ಜೆಡಿಎಸ್ ಪ್ರತಿಭಟನೆ

Prasthutha|

ಚಿಕ್ಕಮಗಳೂರು: ಮಾಂಸದೂಟ ಸೇವಿಸಿ ದೇವಸ್ಥಾನಕ್ಕೆ ಮಾಜಿ ಸಚಿವ ಸಿ.ಟಿ. ರವಿ ಭೇಟಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಇಂದು ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

- Advertisement -


ಅಲ್ಲದೆ, ಸಿ.ಟಿ.ರವಿ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು, ತೊಲಗಲಿ, ತೊಲಗಲಿ ಸಿ.ಟಿ.ರವಿ ತೊಲಗಲಿ ಎಂದು ಘೋಷಣೆ ಕೂಗಿದರು.


ಹಿರಿಯರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಸಿ.ಟಿ.ರವಿ ಬಿಡಬೇಕು. ಸಿ.ಟಿ. ರವಿ ಹೇಳುವುದು ಒಂದು, ಮಾಡುವುದು ಹಿರಿಯ ರಾಜಕಾರಣಿಗಳಿಗೆ ಗೌರವ ಕೊಡಲಿಲ್ಲ ಅಂದರೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

Join Whatsapp