ಎಂಆರ್ಪಿಎಲ್ ಸಂಸ್ಥೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಂಸದ ಪ್ರಜ್ವಲ್ ರೇವಣ್ಣ
ಮಂಗಳೂರು: ಸ್ಥಳೀಯ ಯುವಕರಿಗೆ ಉದ್ಯೋಗ ನೀಡುವಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಗ್ರಹಿಸಿದ್ದಾರೆ. ಅಲ್ಲದೆ, ಕಾಟಿಪಳ್ಳದಲ್ಲಿರುವ ಎಂಆರ್ಪಿಎಲ್ ಮುಖ್ಯದ್ವಾರದ ಬಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಎಂಆರ್ಪಿಎಲ್ ಸೇರಿದಂತೆ ಹಲವು ಬೃಹತ್ ಕಂಪನಿಗಳಲ್ಲಿ ಸ್ಥಳೀಯ ಯುವಕರು ಉದ್ಯೋಗ ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಆರ್ಪಿಎಲ್ ಸೇರಿದಂತೆ ಬೃಹತ್ ಉದ್ದಿಮೆಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ದೊರಕಬೇಕೆಂದು ಆಗ್ರಹಿಸಿದರು. ಈ ಬಗ್ಗೆ ಎಂಆರ್ಪಿಎಲ್ ಸಂಸ್ಥೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.