Home ಟಾಪ್ ಸುದ್ದಿಗಳು ಮಕರ ಸಂಕ್ರಾಂತಿ ನಂತರ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಎಚ್. ಡಿ. ಕುಮಾರಸ್ವಾಮಿ

ಮಕರ ಸಂಕ್ರಾಂತಿ ನಂತರ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಎಚ್. ಡಿ. ಕುಮಾರಸ್ವಾಮಿ

ಮೈಸೂರು: ಜನವರಿ 15ರ ಮಕರ ಸಂಕ್ರಾಂತಿ ನಂತರ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.


ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಇತರೆ ಪಕ್ಷಗಳ ಮುಂಚೆಯೇ ಅಭ್ಯರ್ಥಿಗಳ ಮೊದಲ ಪಟ್ಟಿ ಜೆಡಿಎಸ್ ಬಿಡುಗಡೆಗೊಳಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸಿರುವ ಪಂಚರತ್ನ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಆತಂಕ ಉಂಟುಮಾಡಿದೆ. ರಾಜ್ಯದಲ್ಲಿ ಸ್ವತಂತ್ರವಾಗಿ 130 ಸ್ಥಾನಗಳನ್ನು ಪಡೆಯುವ ಮೂಲಕ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದರು.


ಮುಂದೆ ನಾವು ಯಾವ ಪಕ್ಷದೊಂದಿಗೂ ನಾವು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳನ್ನು ರಾಜ್ಯದಿಂದ ಹೊರ ಹಾಕಲಿದ್ದಾರೆ. ಪಂಚರತ್ನ ಯೋಜನೆಗಳನ್ನು ಅನುಷ್ಠಾನಗೊಳಿಸುವುದೇ ನಮ್ಮ ಮೂಲ ಉದ್ದೇಶವಾಗಿದೆ. ಜನವರಿ 5ರಿಂದ ಬೀದರ್, ಕಲ್ಬುರ್ಗಿ ಸೇರಿದಂತೆ 8 ಕ್ಷೇತ್ರಗಳಲ್ಲಿ ಪಂಚರತ್ನ ಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಾದರೆ ಸ್ವಯಂ ನಾವು ನಿಯಮಗಳನ್ನು ಪಾಲಿಸಲಿದ್ದೇವೆ, ಸುಳ್ಳು ಕೋವಿಡ್ ಕಾರಣದಿಂದ ಪಂಚರತ್ನ ಯಾತ್ರೆಯನ್ನು ತಡೆಯಲು ಸಾಧ್ಯವಿಲ್ಲ ಎಂದರು.

Join Whatsapp
Exit mobile version