Home ಟಾಪ್ ಸುದ್ದಿಗಳು JDS ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ

JDS ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಸ್ವೀಕಾರ ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಭಾನುವಾರ ಪದಗ್ರಹಣ ನಡೆಯಿತು. ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಇದ್ದರು.

ಹಾಲಿ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಅವರು, ಪರಿಷತ್‌ ವಿರೋಧ ಪಕ್ಷದ ಸ್ಥಾನ ಕೈತಪ್ಪಿದ ಕಾರಣಕ್ಕೆ ಮುನಿಸಿಕೊಂಡು ಇತ್ತೀಚೆಗೆ ಜೆಡಿಎಸ್‌ ಸೇರಿದ್ದರು.

Join Whatsapp
Exit mobile version