ಸರ್ವ ಸದಸ್ಯರ ಸಲಹೆ ಆಧರಿಸಿ ರಾಜ್ಯಾಧ್ಯಕ್ಷ ಸ್ಥಾನ ನಿರ್ವಹಿಸುವೆ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ

Prasthutha|

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಸಭೆಗೆ ಆಗಮಿಸಿ ಸಲಹೆ ನೀಡಿದರು. ಸರ್ವ ಸದಸ್ಯರ ಸಲಹೆ ಆಧರಿಸಿ ರಾಜ್ಯಾಧ್ಯಕ್ಷ ಸ್ಥಾನ ನಿರ್ವಹಿಸುವೆ ಎಂದು ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸರ್ಕಾರದ ಲೋಪಗಳ ವಿರುದ್ಧ ಸಮರ್ಥವಾಗಿ ಹೋರಾಟ ಮಾಡುವೆ. ಸದನದ ಒಳಗೆ, ಹೊರಗೆ ಜೆಡಿಎಸ್ ಸಮರ್ಥವಾಗಿ ಹೋರಾಡಲಿದೆ ಎಂದರು.


ಇಂದು ನಡೆದ ಸಭೆಯಲ್ಲಿ ಜೆಡಿಎಸ್ ನ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. 18 ಶಾಸಕರ ಮತ್ತು ಪಕ್ಷದ ಪದಾಧಿಕಾರಿಗಳ ಅಭಿಪ್ರಾಯ ಪಡೆದಿದ್ದೇವೆ. ಪಕ್ಷ ಸಂಘಟನೆ ದೃಷ್ಟಿಯಿಂದ ದಸರಾ ನಂತರ ಹಲವಾರು ನಿರ್ಣಯ ಕೈಗೊಳ್ಳಲಾಗುವುದು. ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಆಘಾತಕ್ಕೊಳಗಿದ್ದೆವು. ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.