ಚಿಕ್ಕಮಗಳೂರು: ಮಂಡ್ಯದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿದರೂ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಹೇಳಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಒಂದಲ್ಲ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಲಾಗಿದ್ದು, ನಮ್ಮ ಅಭ್ಯರ್ಥಿಗಳನ್ನು ಯಾವ ರೀತಿ ವಿಶ್ವಾಸ ತೆಗೆದುಕೊಳ್ಳಬೇಕು ಎಂಬ ಚರ್ಚೆ ನಡೆದಿದೆ. ರಾಮ ಮಂದಿರ ಉದ್ಘಾಟನೆ ಚುನಾವಣೆಯ ಮುಂಚೂಣಿಗೆ ಬರುತ್ತದೆ. ಈ ಹಿಂದೆ ಕಾಂಗ್ರೆಸ್ ಜೊತೆಗಿನ ಹೊಂದಾಣಿಕೆಗೂ, ಈಗಿನ ಹೊಂದಾಣಿಕೆಗೂ ಅಜಗಜಾಂತರ ವ್ಯತ್ಯಾಸವಿದೆ. ಬಿಜೆಪಿ – ಜೆಡಿಎಸ್ ಸ್ವಾಭಾವಿಕ ಮೈತ್ರಿ ಆಗಿದೆ. ಇದು ಎಲ್ಲ ಕಾರ್ಯಕರ್ತರಲ್ಲಿ ಖುಷಿ ತಂದಿದೆ” ಎಂದು ಹೇಳಿದರು.
ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಕಾಂಗ್ರೆಸ್ ಹೋಗ್ತಿಲ್ಲ. ಅದು ಯಾವ ಕಾರಣಕ್ಕೆ ಹೋಗ್ತಿಲ್ಲ ಎಂಬುದನ್ನು ಸಾರ್ವಜನಿಕರಿಗೆ ಅವರೇ ಹೇಳ್ತಾರೆ. ಅದು ನನಗೆ ಸಂಬಂಧವಿಲ್ಲ. ಇದು ನಾಡ ಹಬ್ಬ, ದೇಶದ ಹಬ್ಬ, ಉತ್ಸಾಹ ಹೇಗಿದೆ ಎಂದರೆ ರಾಮ ರಾಜ್ಯವಾಗಬೇಕು ಎಂಬ ಜನಾಭಿಪ್ರಾಯವಿದೆ. ಅದಕ್ಕೆ ನಾನು ಕೈಜೋಡಿಸುತ್ತೇನೆ.