Home ಟಾಪ್ ಸುದ್ದಿಗಳು ಜೆಡಿಎಸ್ ಯುವ ಘಟಕದ ಅಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ

ಜೆಡಿಎಸ್ ಯುವ ಘಟಕದ ಅಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು : ಆನೇಕಲ್ ನ ಜೆಡಿಎಸ್ ಯುವ ಘಟಕದ ಅಧ್ಯಕ್ಷ ರುದ್ರೇಶ್ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ವ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ.


ಆನೇಕಲ್ ನ ಹೊಸೂರು ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ನಿನ್ನೆ ರಾತ್ರಿ 8.30ರ ವೇಳೆ ಮನೆಗೆ ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.


ಹೆಲ್ಮೆಟ್ ನಿಂದ ಮನಬಂದಂತೆ ಥಳಿಸಿ ನಡೆಸಿದ ಹಲ್ಲೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ರುದ್ರೇಶ್ ಅವರನ್ನು ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಗಮನಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಚಿಕಿತ್ಸೆ ಪಡೆಯುತ್ತಿರುವ ರುದ್ರೇಶ್ ಅವರ ಸ್ಥಿತಿ ಗಂಭೀರವಾಗಿದೆ.ರಾಜಕೀಯ ಪ್ರೇರಿತರಾಗಿ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜಣ್ಣನ ಜೊತೆ ಗುರುತಿಸಿಕೊಂಡಿದ್ದ ರುದ್ರೇಶ್, ಇತ್ತೀಚೆಗೆ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿದ್ದರು. ಹಲ್ಲೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Join Whatsapp
Exit mobile version