ಬಿಜೆಪಿಯೊಂದಿಗಿನ ಸಖ್ಯ ತೊರೆದ ಜೆಡಿಯು: ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿಎಂ ನಿತೀಶ್ ಕುಮಾರ್

Prasthutha|

ಪಾಟ್ನ: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಬಿಜೆಪಿ ಜೊತೆಗಿನ ಮೈತ್ರಿ ಕಡಿತಗೊಳಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

- Advertisement -


ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಫಾಗು ಚೌಹಾಣ್ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಸಂಜೆ 4 ಗಂಟೆಗೆ ರಾಜ್ಯಪಾಲರು ಸಮಯ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಶನಿವಾರ ಪಕ್ಷದ ನಾಯಕ ಆರ್ ಸಿಪಿ ಸಿಂಗ್ ಅವರ ರಾಜೀನಾಮೆ ನಂತರ ಜೆಡಿಯುನ ಎಲ್ಲಾ ಶಾಸಕರು ಮತ್ತು ಸಂಸದರ ಸಭೆಯ ಬಳಿಕ ಈ ಬೆಳವಣಿಗೆ ನಡೆದಿದೆ.


ಸಭೆಯಲ್ಲಿ ಜೆಡಿಯುನ ಎಲ್ಲಾ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೆಗೆದುಕೊಳ್ಳುವ ನಿರ್ಧಾರಗಳಿಗೆ ತಾವು ಬದ್ಧರಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಬಿಜೆಪಿಯೊಂದಿಗಿನ ಸಖ್ಯವನ್ನು ಜೆಡಿಯು ತೊರೆಯಲು ನಿರ್ಧರಿಸಿದೆ ಎಂಬ ಮಾಹಿತಿ ಸಿಕ್ಕಿದೆ.

Join Whatsapp