Home ಟಾಪ್ ಸುದ್ದಿಗಳು ಬಿಜೆಪಿಯೊಂದಿಗಿನ ಸಖ್ಯ ತೊರೆದ ಜೆಡಿಯು: ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿಎಂ ನಿತೀಶ್ ಕುಮಾರ್

ಬಿಜೆಪಿಯೊಂದಿಗಿನ ಸಖ್ಯ ತೊರೆದ ಜೆಡಿಯು: ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿಎಂ ನಿತೀಶ್ ಕುಮಾರ್

ಪಾಟ್ನ: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಬಿಜೆಪಿ ಜೊತೆಗಿನ ಮೈತ್ರಿ ಕಡಿತಗೊಳಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.


ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಫಾಗು ಚೌಹಾಣ್ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಸಂಜೆ 4 ಗಂಟೆಗೆ ರಾಜ್ಯಪಾಲರು ಸಮಯ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಶನಿವಾರ ಪಕ್ಷದ ನಾಯಕ ಆರ್ ಸಿಪಿ ಸಿಂಗ್ ಅವರ ರಾಜೀನಾಮೆ ನಂತರ ಜೆಡಿಯುನ ಎಲ್ಲಾ ಶಾಸಕರು ಮತ್ತು ಸಂಸದರ ಸಭೆಯ ಬಳಿಕ ಈ ಬೆಳವಣಿಗೆ ನಡೆದಿದೆ.


ಸಭೆಯಲ್ಲಿ ಜೆಡಿಯುನ ಎಲ್ಲಾ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೆಗೆದುಕೊಳ್ಳುವ ನಿರ್ಧಾರಗಳಿಗೆ ತಾವು ಬದ್ಧರಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಬಿಜೆಪಿಯೊಂದಿಗಿನ ಸಖ್ಯವನ್ನು ಜೆಡಿಯು ತೊರೆಯಲು ನಿರ್ಧರಿಸಿದೆ ಎಂಬ ಮಾಹಿತಿ ಸಿಕ್ಕಿದೆ.

Join Whatsapp
Exit mobile version