ಲೋಕಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಅಭ್ಯರ್ಥಿಗೆ ಬೆಂಬಲ: ಜೆಡಿಯು ಸ್ಪಷ್ಟನೆ

Prasthutha|

ನವದೆಹಲಿ: ತಮ್ಮ ಪಕ್ಷ ಮತ್ತು ತೆಲುಗು ದೇಶಂ ಪಕ್ಷ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಿದ್ದು, ಲೋಕಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಸೂಚಿಸುವ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಜೆಡಿಯು ನಾಯಕ ಕೆ.ಸಿ. ತ್ಯಾಗಿ ಹೇಳಿದ್ದಾರೆ.

- Advertisement -


ಹೊಸ ಲೋಕಸಭಾ ಸ್ಪೀಕರ್ ಹುದ್ದೆ ಟಿಡಿಪಿ ಅಥವಾ ಜೆಡಿಯು ಪಕ್ಷಕ್ಕೆ ಸಿಗಬಹುದು ಎಂಬ ಕೆಲವು ವಿರೋಧ ಪಕ್ಷದ ನಾಯಕರ ಟೀಕೆಗಳ ಬಗ್ಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದಲ್ಲಿ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುತ್ತಿದೆ. ನಾವು ಬಿಜೆಪಿ ನಾಮನಿರ್ದೇಶನ ಮಾಡುವ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ ಎಂದಿದ್ದಾರೆ.


ಕೆ.ಸಿ. ತ್ಯಾಗಿ ಅವರ ಹೇಳಿಕೆಗಳು ಬಿಜೆಪಿಯೇ ಸ್ಪೀಕರ್ ಸ್ಥಾನಕ್ಕೆ ತನ್ನ ನಾಮನಿರ್ದೇಶನವನ್ನು ಮಾಡುವ ಸಾಧ್ಯತೆಯಿದೆ ಮತ್ತು ಅಭ್ಯರ್ಥಿಯು ಪಕ್ಷದ ಮಿತ್ರಪಕ್ಷಗಳ ನಡುವೆ ಇಲ್ಲದಿರಬಹುದು ಎಂಬುದರ ಸೂಚನೆಯಾಗಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಜೂನ್ 26ರಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಿಗದಿಯಾಗಿದೆ.

Join Whatsapp