ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಜೆಡಿಯು ಪ್ರತಿಭಟನೆ

Prasthutha|

ಬೆಂಗಳೂರು: ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಹಾಗೂ ನಿತ್ಯ ಬಳಕೆ ವಸ್ತುಗಳು ಬೆಲೆ ಗಳು ಗಗನಕ್ಕೇರುತ್ತಿದ್ದು, ವೈಜ್ಞಾನಿಕ ಬೆಲೆ ಅಳವಡಿಸಿ ಸ್ವಾಮಿನಾಥನ್ ವರದಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಜೆಡಿಯು ಪಕ್ಷದ ವತಿಯಿಂದ ಬೆಂಗಳೂರಿನಲ್ಲಿಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಮಾತನಾಡಿ, ಸೆಪ್ಟೆಂಬರ್ ಮೊದಲ ವಾರದಲ್ಲಿ ಗ್ಯಾಸ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಅಡುಗೆ ಅನಿಲ ಬೆಲೆ 887 ರೂಪಾಯಿಗೆ ತಲುಪಿದೆ. ಜತೆಗೆ ರೈತರ ಸ್ಥಿತಿ ಚಿಂತಾಜನಕವಾಗಿದೆ. ರಾಜ್ಯ ಸರ್ಕಾರ, ರಾಜ್ಯವನ್ನು ಪ್ರತಿನಿಧಿಸುವ ಸಂಸತ್ ಸದಸ್ಯರು ದೈರ್ಯ ತೋರಬೇಕಿದೆ ಎಂದು ಹೇಳಿದರು.
ಪ್ರತಿಭಟನಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

- Advertisement -