ಉಡುಪಿ : ನೇಜಾರಿನಲ್ಲಿ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಗಗನಸಖಿ ಐನಾಝ್ ಮೇಲಿನ ಅಸೂಯೆ ಮತ್ತು ದ್ವೇಷವೇ ಈ ಕೊಲೆಗೆ ಕಾರಣ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರವೀಣ್ ಗಗನಸಖಿ ಐನಾಝ್ ಮೇಲೆ ದ್ವೇಷದಲ್ಲಿ ಈ ಕೊಲೆ ಮಾಡಿದ್ದಾನೆ. ತಡೆಯಲು ಬಂದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕೂಡ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಅವರು ಹೇಳಿದರು.
ಆತ ಐನಾಝ್ ಳನ್ನು ಅತಿಯಾಗಿ ಹಚ್ಚಿಕೊಂಡು ಆಕೆ ತನ್ನ ನಿಯಂತ್ರಣದಲ್ಲಿಯೇ ಇರಬೇಕೆಂಬ ಮನಸ್ಥಿತಿಯಿಂದ ಈ ಕೊಲೆ ಮಾಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.
ನ.12ರಂದು ಬೆಳಗ್ಗೆ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ಹಸೀನಾ( 48), ಮಕ್ಕಳಾದ ಅಫ್ನಾನ್ (23), ಅಯ್ನಾಝ್ (20) ಮತ್ತು ಅಸೀಮ್ (14) ಎಂಬವರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು.