Home ಟಾಪ್ ಸುದ್ದಿಗಳು ಉಡುಪಿ ಹತ್ಯಾಕಾಂಡ | ಗಗನಸಖಿ ಐನಾಝ್ ಮೇಲಿನ ಅಸೂಯೆ ಮತ್ತು ದ್ವೇಷವೇ ಕೊಲೆಗೆ ಕಾರಣ: ಎಸ್ಪಿ...

ಉಡುಪಿ ಹತ್ಯಾಕಾಂಡ | ಗಗನಸಖಿ ಐನಾಝ್ ಮೇಲಿನ ಅಸೂಯೆ ಮತ್ತು ದ್ವೇಷವೇ ಕೊಲೆಗೆ ಕಾರಣ: ಎಸ್ಪಿ ಡಾ.ಅರುಣ್

ಉಡುಪಿ : ನೇಜಾರಿನಲ್ಲಿ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಗಗನಸಖಿ ಐನಾಝ್ ಮೇಲಿನ ಅಸೂಯೆ ಮತ್ತು ದ್ವೇಷವೇ ಈ ಕೊಲೆಗೆ ಕಾರಣ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.


ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರವೀಣ್ ಗಗನಸಖಿ ಐನಾಝ್ ಮೇಲೆ ದ್ವೇಷದಲ್ಲಿ ಈ ಕೊಲೆ ಮಾಡಿದ್ದಾನೆ. ತಡೆಯಲು ಬಂದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕೂಡ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಅವರು ಹೇಳಿದರು.


ಆತ ಐನಾಝ್ ಳನ್ನು ಅತಿಯಾಗಿ ಹಚ್ಚಿಕೊಂಡು ಆಕೆ ತನ್ನ ನಿಯಂತ್ರಣದಲ್ಲಿಯೇ ಇರಬೇಕೆಂಬ ಮನಸ್ಥಿತಿಯಿಂದ ಈ ಕೊಲೆ ಮಾಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.


ನ.12ರಂದು ಬೆಳಗ್ಗೆ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ಹಸೀನಾ( 48), ಮಕ್ಕಳಾದ ಅಫ್ನಾನ್ (23), ಅಯ್ನಾಝ್ (20) ಮತ್ತು ಅಸೀಮ್ (14) ಎಂಬವರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು.

Join Whatsapp
Exit mobile version