ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಜಾರ್ಖಂಡ್ ನ ಬಿಜೆಪಿ ಶಾಸಕ ಜೈ ಪ್ರಕಾಶ್ ಭಾಯ್ ಪಟೇಲ್, ಕಾಂಗ್ರೆಸ್ ಗೆ ಸೇರಿದ್ದಾರೆ.
ಜಾರ್ಖಂಡ್ ನ ಎಐಸಿಸಿ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಟೇಲ್ ಅವರು ಕಾಂಗ್ರೆಸ್ಗೆ ಸೇರ್ಪಡೆಗೊಂಡರು. ಪಟೇಲ್ ಅವರು ಹಜಾರಿಬಾಗ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಾಂಡು ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ. ಮಾಜಿ ಸಂಸದ, ತಮ್ಮ ತಂದೆ ತೆಕ್ ಲಾಲ್ ಮಹ್ತೊ ಕನಸುಗಳನ್ನು ನನಸು ಮಾಡಲು ಬಯಸುವುದಾಗಿ ಪಟೇಲ್ ಹೇಳಿದ್ದಾರೆ. ಎನ್ಡಿಎಯಲ್ಲಿ ನನ್ನ ತಂದೆಯ ಸಿದ್ಧಾಂತ ಕಾಣುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ‘ಇಂಡಿಯಾ’ ಮೈತ್ರಿಕೂಟವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಕಾಂಗ್ರೆಸ್ಗೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದ್ದಾರೆ.