ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ಜಾರ್ಖಂಡ್ ನ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಏಕಾಏಕಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಜಾರ್ಖಂಡ್ ನ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಾರ್ಖಂಡ್ ನಲ್ಲಿ ಕಾಂಗ್ರೆಸ್, ಜೆಎಂಎಂ ಮತ್ತು ಆರ್ಜೆಡಿ ಮೈತ್ರಿಕೂಟದ ಬಗ್ಗೆ ಗೀತಾ ಕೋಡಾ ಅತೃಪ್ತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಇಂದು ನಾನು ಬಿಜೆಪಿ ಸೇರಿದ್ದೇನೆ. ತುಷ್ಟೀಕರಣ ರಾಜಕಾರಣ ಮಾಡುವ ಮೂಲಕ ಕಾಂಗ್ರೆಸ್ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಪಕ್ಷವು ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುತ್ತದೆ ಎಂದು ಹೇಳುತ್ತದೆ, ಆದರೆ ಅದು ತನ್ನ ಕುಟುಂಬವನ್ನು ಮಾತ್ರ ಕರೆದುಕೊಂಡು ಹೋಗುತ್ತದೆ’ ಎಂದು ಕೋರಾ ತಮ್ಮ ರಾಜೀನಾಮೆ ಹಿಂದಿನ ಕಾರಣ ತಿಳಿಸಿದ್ದಾರೆ.