ರಾಂಚಿ: ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಗೆಲಸದಾತನ ಮನೆಯಿಂದ ಭಾರಿ ನಗದು ವಶಪಡಿಸಿಕೊಂಡ ನಂತರ ಈ ಬಂಧನ ನಡೆದಿದೆ.
ರಾಂಚಿಯ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಮಂಗಳವಾರ ಸಚಿವರನ್ನು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು.
ಆಲಂಗೀರ್ ಆಲಂ ಅವರ ಅವರ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಯ ಮನೆ ಸಹಾಯಕನಿಗೆ ಸಂಬಂಧಿಸಿದ ಫ್ಲ್ಯಾಟ್ನಿಂದ ವಶಪಡಿಸಿಕೊಳ್ಳಲಾದ 34 ಕೋಟಿ ರೂ.ಗಿಂತ ಹೆಚ್ಚು ಹಣವನ್ನ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ಬಗ್ಗೆ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.