ಪಾಕ್ ಗೆ ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪ: ಜಿತೇಂದರ್ ಸಿಂಗ್ ಗೆ ಜಾಮೀನು ನಿರಾಕರಣೆ

Prasthutha|

ಬೆಂಗಳೂರು: ಭಾರತದ ನೌಕಾದಳದ ಮಾಹಿತಿಯನ್ನು ಪಾಕಿಸ್ಥಾನದ ಗೂಢಚರ್ಯೆ ಸಂಸ್ಥೆ ಐಎಸ್ ಐನೊಂದಿಗೆ ಹಂಚಿಕೊಂಡ ಆರೋಪದಲ್ಲಿ ಜೈಲು ಪಾಲಾಗಿರುವ ಜಿತೇಂದರ್ ಸಿಂಗ್ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

- Advertisement -

ಬೆಂಗಳೂರಿನಿಂದ ಪಾಕಿಸ್ಥಾನದ ಗುಪ್ತಚರ ದಳಕ್ಕೆ ಅರ್ಜಿದಾರ ಮಾಹಿತಿ ಹಂಚಿಕೊಂಡಿರುವುದು ದಾಖಲೆಯಿಂದ ಸ್ಪಷ್ಟವಾಗುತ್ತದೆ ಎಂದ ನ್ಯಾ| ಕೆ. ನಟರಾಜನ್ ಅವರ ನ್ಯಾಯಪೀಠ ಜಿತೇಂದರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿದೆ.

ಆರೋಪಿ ಐಎಸ್ ಐನೊಂದಿಗೆ ಹಂಚಿಕೊಂಡಿರುವ ಮಾಹಿತಿ ಭಾರತದ ಸುರಕ್ಷೆ ಮತ್ತು ಭದ್ರತೆ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ದೇಶದ ಸಮಗ್ರತೆ ಹಾಗೂ ಸೌರ್ವಭೌಮತ್ವದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಹಾಗಾಗಿ, ಜಾಮೀನು ನೀಡಲು ಇದು ಅರ್ಹ ಪ್ರಕರಣವಲ್ಲ ಎಂದು ಹೈಕೋರ್ಟ್ ತಿಳಿಸಿದೆ.



Join Whatsapp