ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆಗಳು ಅತಿರೇಕಗೊಳ್ಳುತ್ತಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರತಿಭಟನೆಯ ಸಾಧ್ಯತೆ ಕಂಡು ಬರುತ್ತಿದೆ.
ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಜಮ್ಮು ಮತ್ತು ಕಾಶ್ಮೀರದ ಭದ್ರವಾಹ್ ಮತ್ತು ಕಿಶ್ತವಾರ್ ನಲ್ಲಿ ಕರ್ಫ್ಯೂ ಜಾರಿ ಮಾಡಿ , ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಕೆ ಶರ್ಮಾ ತಿಳಿಸಿದ್ದಾರೆ.
ಪರಿಸ್ಥಿತಿ ಹತೋಟಿಯಲ್ಲಿದ್ದು, ಭಿನ್ನ ಕೋಮುಗಳ ನಡುವೆ ಕೋಮು ಸಂಘರ್ಷವಾಗಬಾರದೆಂದು ಈ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.