JN.1 ಸೋಂಕಿನಿಂದ ಪ್ರಾಣಾಪಾಯವಿಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

Prasthutha|

- Advertisement -

ಬೆಂಗಳೂರು: ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ JN.1 ಸೋಂಕು ಕಾಣಿಸಿಕೊಂಡಿದ್ದರೂ ಜನ ಆತಂಕಕ್ಕೆ ಒಳಗಾಗದೇ, ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ನೀಡಿದರು.

ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಅಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಸಭೆ ನಡೆಸಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು.

- Advertisement -

ರೂಪಾಂತರಿ ಜೆಎನ್.1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ತಜ್ಞರು ಹೇಳಿದ್ದಾರೆ. ಆದರೂ ಇದರ ಬಗ್ಗೆ ಮೈ ಮರೆಯದೇ, ಕೆಲ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.



Join Whatsapp