ಬೆಂಗಳೂರು: ಕೋವಿಡ್ ರೂಪಾಂತರಿ ಜೆಎನ್.1 ಉಪತಳಿ ಕರ್ನಾಟಕಕ್ಕೂ ಲಗ್ಗೆ ಇಟ್ಟಿದ್ದು, ಈ ಸಂಬಂಧ ಇಂದು ರಾಜ್ಯ ಸಂಪುಟ ಉಪಸಮಿತಿ ಸಭೆ ನಡೆದಿದ್ದು, ಉಪತಳಿ ನಿಯಂತ್ರಣದ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ನಿನ್ನೆಯ(ಡಿಸೆಂಬರ್ 25) 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಹಿಂದೆ ಆದ ತಪ್ಪು ಆಗಬಾರದು ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಆಶ್ಚರ್ಯ ಪಡುವ ವಿಚಾರ ಅಲ್ಲ. ಇದು ಎಕ್ಸ್ ಪೆಕ್ಟ್ ಮಾಡಲಾಗಿತ್ತು. Variant of interest ಅಂತ WHO ತಿಳಿಸಿದೆ. ರಿಸ್ಕ್ ಫ್ಯಾಕ್ಟರಿ ಅಡೈಸರಿ ಬಂದಿಲ್ಲ. ಇದು ಸಮಾಧಾನಕರ ವಿಚಾರ. ಆದರೂ ಎಚ್ಚರಿಕೆ ಅಗತ್ಯ ಎಂದು ಹೇಳಿದರು.