ಜ್ಞಾನಪೀಠ ಪ್ರಶಸ್ತಿ ಪ್ರಕಟ: ಸಾಹಿತಿ ಗುಲ್ಜಾರ್, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯಗೆ ಪ್ರಶಸ್ತಿ

Prasthutha|

ನವದೆಹಲಿ: 2023ನೇ ಸಾಲಿನ ಜ್ಞಾನಪೀಠ ಪ್ರಶಸ್ತಿ ಪ್ರಕಟವಾಗಿದ್ದು ಖ್ಯಾತ ಉರ್ದು ಕವಿ, ಚಲನಚಿತ್ರ ನಿರ್ಮಾಪಕ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ 2023ರ 58ನೇ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

- Advertisement -

ಸಂಸ್ಕೃತ ಸಾಹಿತಿ ಜಗದ್ಗುರು ರಾಮಭದ್ರಾಚಾರ್ಯ ಮತ್ತು ಉರ್ದು ಸಾಹಿತಿ ಗುಲ್ಜಾರ್ ಅವರಿಗೆ 2023ನೇ ಸಾಲಿನ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದಿ ಚಿತ್ರರಂಗಕ್ಕೆ ನೀಡಿದ ಕೊಡುಗೆಗಳಿಗಾಗಿ ಹೆಚ್ಚು ಪ್ರಸಿದ್ಧರಾದ ಗುಲ್ಜಾರ್ ಸಮಕಾಲೀನ ಕಾಲದ ಅತ್ಯಂತ ಪ್ರಸಿದ್ಧ ಉರ್ದು ಕವಿಗಳಲ್ಲಿ ಒಬ್ಬರಾಗಿದ್ದಾರೆ.

- Advertisement -

2002ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಗುಲ್ಜಾರ್ ಪಾತ್ರರಾಗಿದ್ದರು. ಅಲ್ಲದೆ, ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದೀಗ ಜ್ಞಾನಪೀಠ ಪ್ರಶಸ್ತಿಯ ಹಿರಿಮೆಗೂ ಪಾತ್ರರಾಗಿದ್ದಾರೆ.

ಇನ್ನು, ಚಿತ್ರಕೂಟದ ತುಳಸಿ ಪೀಠದ ಸ್ಥಾಪಪರಾಗಿರುವ ರಾಮಭದ್ರಾಚಾರ್ಯರು ಹಿಂದೂ ಅದ್ಯಾತ್ಮಿಕ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಮಭದ್ರಾಚಾರ್ಯರು ಪ್ರಸಿದ್ಧ ಹಿಂದೂ ಆಧ್ಯಾತ್ಮಿಕ ವ್ಯಕ್ತಿ, ಶಿಕ್ಷಣತಜ್ಞ ಮತ್ತು 100 ಕ್ಕೂ ಹೆಚ್ಚು ಪುಸ್ತಕಗಳ ಲೇಖಕರಾಗಿದ್ದಾರೆ.

Join Whatsapp