ಜ.20ರಂದು ಜೋ ಬೈಡನ್ ಪ್ರಮಾಣವಚನ ಸ್ವೀಕಾರ | ವಾಷಿಂಗ್ಟನ್ ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಟ್ರಂಪ್!

Prasthutha|

ವಾಷಿಂಗ್ಟನ್ : ಅಮೆರಿಕದ ನೂತನ ಚುನಾಯಿತ ಅಧ್ಯಕ್ಷ ಜೋ ಬೈಡನ್ ರ ಪ್ರಮಾಣವಚನದ ಹಿನ್ನೆಲೆಯಲ್ಲಿ, ವಾಷಿಂಗ್ಟನ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

- Advertisement -

ಜೋ ಬೈಡನ್ ಅಧಿಕಾರ ಸ್ವೀಕಾರಕ್ಕೂ ಮೊದಲು ಗಲಭೆಗಳು ನಡೆಯಬಹುದಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವಾಷಿಂಗ್ಟನ್ ನಲ್ಲಿ ಜ.24ರ ವರೆಗೂ ತುರ್ತು ಪರಿಸ್ಥಿತಿ ಮುಂದುವರಿಯಲಿದೆ.

ದೀರ್ಘಕಾಲೀನ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಸ್ಥಳೀಯರ ಮೇಲೆ ವ್ಯತಿರಿಕ್ತ ಪರಿಣಾಮಗಳು ಬೀರದಂತೆ ಆಂತರಿಕ ಭದ್ರತಾ ಇಲಾಖೆ ಮತ್ತು ಕೇಂದ್ರೀಯ ತುರ್ತು ಪರಿಸ್ಥಿತಿ ನಿರ್ವಹಣಾ ಸಂಸ್ಥೆಗಳು ಕ್ರಮಗಳನ್ನು ತೆಗೆದುಕೊಳ್ಳಬೇಕು ಹೇಳಿಕೆಯೊಂದರಲ್ಲಿ ನಿರ್ದೇಶಿಸಲಾಗಿದೆ.

- Advertisement -

ಕಳೆದ ವಾರ ಟ್ರಂಪ್ ಬೆಂಬಲಿಗರು ಸಾವಿರಾರು ಸಂಖ್ಯೆಯಲ್ಲಿ ವಾಷಿಂಗ್ಟನ್ ನಲ್ಲಿ ಕ್ಯಾಪಿಟಲ್ ಕಟ್ಟಡದ ಮೇಲೆ ಹಿಂಸಾತ್ಮಕ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  

Join Whatsapp