ಜೋಧ್ ಪುರ| ರೈಲು ಹಳಿ ಮೇಲಿದ್ದ ಸಿಮೆಂಟ್ ಸ್ಲ್ಯಾಬ್’ಗೆ ವಂದೇ ಭಾರತ್ ರೈಲು ಡಿಕ್ಕಿ

Prasthutha|

ಅಹಮ್ಮದಾಬಾದ್: ಅಹ್ಮದಾಬಾದ್- ಜೋಧ್ ಪುರಗೆ ಹೋಗುವ ವಂದೇ ಭಾರತ್ ರೈಲು ಹಳಿಗಳ ಮೇಲಿದ್ದ ಸಿಮೆಂಟ್ ಸ್ಲ್ಯಾಬ್ ಗೆ ಡಿಕ್ಕಿ ಹೊಡೆದಿರುವ ಘಟನೆ ರಾಜಸ್ತಾನದ ಪಾಲಿ ಎಂಬಲ್ಲಿ ನಡೆದಿದೆ.

- Advertisement -


ರೈಲ್ವೇ ಅಧಿಕಾರಿಗಳ ಪ್ರಕಾರ, ಜವಾಯಿ ಹಾಗೂ ಬಿರೋಲಿಯಾ ನಡುವೆ ರೈಲು ಚಲಿಸುತ್ತಿರುವಾಗ ಎಂಜಿನ್ ಸಿಮೆಂಟ್ ಸ್ಲ್ಯಾಬ್ಗೆ ಡಿಕ್ಕಿ ಹೊಡೆದಿದೆ.


ಘಟನೆಯ ಬಗ್ಗೆ ವಾಯುವ್ಯ ಅಧಿಕಾರಿ (ಸಿಪಿಆರ್ಒ) ಶಶಿಕಿರಣ್ ಮಾತನಾಡಿ, ಘಟನೆಯಿಂದ ರೈಲು ಬರುವಾಗ 8 ನಿಮಿಷ ತಡವಾಗಿ ಬಂದಿದೆ. ಇದರ ಹೊರತಾಗಿ ಯಾವ ಪ್ರಯಾಣಿಕರಿಗೂ ಸಮಸ್ಯೆ ಆಗಿಲ್ಲ ಎಂದು ತಿಳಿಸಿದ್ದಾರೆ.



Join Whatsapp