Home ಟಾಪ್ ಸುದ್ದಿಗಳು ಜೋಧ್ ಪುರ| ರೈಲು ಹಳಿ ಮೇಲಿದ್ದ ಸಿಮೆಂಟ್ ಸ್ಲ್ಯಾಬ್’ಗೆ ವಂದೇ ಭಾರತ್ ರೈಲು ಡಿಕ್ಕಿ

ಜೋಧ್ ಪುರ| ರೈಲು ಹಳಿ ಮೇಲಿದ್ದ ಸಿಮೆಂಟ್ ಸ್ಲ್ಯಾಬ್’ಗೆ ವಂದೇ ಭಾರತ್ ರೈಲು ಡಿಕ್ಕಿ

ಅಹಮ್ಮದಾಬಾದ್: ಅಹ್ಮದಾಬಾದ್- ಜೋಧ್ ಪುರಗೆ ಹೋಗುವ ವಂದೇ ಭಾರತ್ ರೈಲು ಹಳಿಗಳ ಮೇಲಿದ್ದ ಸಿಮೆಂಟ್ ಸ್ಲ್ಯಾಬ್ ಗೆ ಡಿಕ್ಕಿ ಹೊಡೆದಿರುವ ಘಟನೆ ರಾಜಸ್ತಾನದ ಪಾಲಿ ಎಂಬಲ್ಲಿ ನಡೆದಿದೆ.


ರೈಲ್ವೇ ಅಧಿಕಾರಿಗಳ ಪ್ರಕಾರ, ಜವಾಯಿ ಹಾಗೂ ಬಿರೋಲಿಯಾ ನಡುವೆ ರೈಲು ಚಲಿಸುತ್ತಿರುವಾಗ ಎಂಜಿನ್ ಸಿಮೆಂಟ್ ಸ್ಲ್ಯಾಬ್ಗೆ ಡಿಕ್ಕಿ ಹೊಡೆದಿದೆ.


ಘಟನೆಯ ಬಗ್ಗೆ ವಾಯುವ್ಯ ಅಧಿಕಾರಿ (ಸಿಪಿಆರ್ಒ) ಶಶಿಕಿರಣ್ ಮಾತನಾಡಿ, ಘಟನೆಯಿಂದ ರೈಲು ಬರುವಾಗ 8 ನಿಮಿಷ ತಡವಾಗಿ ಬಂದಿದೆ. ಇದರ ಹೊರತಾಗಿ ಯಾವ ಪ್ರಯಾಣಿಕರಿಗೂ ಸಮಸ್ಯೆ ಆಗಿಲ್ಲ ಎಂದು ತಿಳಿಸಿದ್ದಾರೆ.

Join Whatsapp
Exit mobile version