Home ಟಾಪ್ ಸುದ್ದಿಗಳು ಮಮತಾ ಬ್ಯಾನರ್ಜಿ ಸೋಲಿಸಲು ಕೈಜೋಡಿಸಿ: ಕಾಂಗ್ರೆಸ್’ಗೆ ಬಿಜೆಪಿ ಆಗ್ರಹ

ಮಮತಾ ಬ್ಯಾನರ್ಜಿ ಸೋಲಿಸಲು ಕೈಜೋಡಿಸಿ: ಕಾಂಗ್ರೆಸ್’ಗೆ ಬಿಜೆಪಿ ಆಗ್ರಹ

ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಲು ತಮ್ಮ ಜೊತೆ ಕೈಜೋಡಿಸುವಂತೆ ಎಡಪಕ್ಷಗಳು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಕರೆ ನೀಡಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಟಿಎಂಸಿ ಪಕ್ಷವನ್ನು ಸೋಲಿಸಲು ನಾವೆಲ್ಲರೂ ಒಂದಾಗಬೇಕೆಂದು ಬಿಜೆಪಿ ಸಂಸದ ಸೌಮಿತ್ರ ಖಾನ್ ಆಗ್ರಹಿಸಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿ ಜೊತೆ ಎಡಪಕ್ಷ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಆದರೆ ಬಿಜೆಪಿ ಸಂಸದ ಸೌಮಿತ್ರ ಖಾನ್ ಅವರ ಪ್ರಸ್ತಾಪವನ್ನು ಎಡಪಕ್ಷಗಳು ಮತ್ತು ಕಾಂಗ್ರೆಸ್ ತಿರಸ್ಕರಿಸಿದ್ದು, ಬಿಜೆಪಿ ಮತ್ತು ಟಿಎಂಸಿ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಕಾಂಗ್ರೆಸ್ ಆರೋಪಿಸಿದೆ.

ಬೂತ್ ಮಟ್ಟದಲ್ಲಿ ಟಿಎಂಸಿ ಪಕ್ಷದ ವಿರುದ್ಧವಾಗಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಪಕ್ಷದವರಿಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಸಂಸದ ಸೌಮಿತ್ರ ಖಾನ್ ತಿಳಿಸಿದ್ದಾರೆ.

ಈ ಕೊಡುಗೆ ಕುರಿತು ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ಅಧ್ಯಕ್ಷ ಅಧೀರ್ ರಂಜನ್ ಚೌಧರಿ, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ ಎಂದು ತಿಳಿಸಿದ್ದಾರೆ.

Join Whatsapp
Exit mobile version