Home ಟಾಪ್ ಸುದ್ದಿಗಳು ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ ಸೇರ್ಪಡೆ: ಎನ್‌ಸಿಪಿ ಸಂಸದೆ ಸುಪ್ರಿಯಾ...

ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ ಸೇರ್ಪಡೆ: ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ

ಮುಂಬೈ: ವಿರೋಧ ಪಕ್ಷದ ನಾಯಕರು ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆಯೇ ಹೊರತು, ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಇಷ್ಟಪಟ್ಟು ಆ ಪಕ್ಷಕ್ಕೆ ಹೋಗುತ್ತಿಲ್ಲ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರವಿಂದ್‌ ಕೇಜ್ರಿವಾಲ್‌ ಬಂಧನವನ್ನು ಖಂಡಿಸಿದರು. ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಬಿಜೆಪಿಗೆ ಅದರ ಮೇಲಿನ ಪ್ರೀತಿಯಿಂದಾಗಿ, ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕಾಗಲಿ ಹೋಗುತ್ತಿಲ್ಲ. ಭಾರತೀಯ ಚುನಾವಣಾ ಆಯೋಗ, ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಎಲ್ಲವೂ ಅವರ ಬಳಿಯೇ ಇದೆ. ಇವುಗಳನ್ನು ಬಳಸಿ ಬಿಜೆಪಿ ದಾಳಿ ಮಾಡಿಸುತ್ತಾರೆ ಎಂದು ಹೆದರಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಕಿಡಿಗಾರಿದರು.

2009 ರಿಂದ ಪ್ರತಿನಿಧಿಸುತ್ತಿರುವ ಬಾರಾಮತಿ ಸಂಸದೀಯ ಕ್ಷೇತ್ರದಿಂದ ಹಿರಿಯ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

Join Whatsapp
Exit mobile version