Home ಟಾಪ್ ಸುದ್ದಿಗಳು ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ, ರಾಜ್ಯ ಪೊಲೀಸರ ಜಂಟಿ ತನಿಖೆ: ಆರಗ ಜ್ಞಾನೇಂದ್ರ

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ, ರಾಜ್ಯ ಪೊಲೀಸರ ಜಂಟಿ ತನಿಖೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು, ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.


ಮಂಗಳೂರು ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದ್ದು, ರಾಜ್ಯ ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿಗಳು ತನಿಖೆಯಲ್ಲಿ ಕೈ ಜೋಡಿಸಿದ್ದಾರೆ.


ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆಯ ಹಿಂದಿನ ದುಷ್ಟರು ಯಾರಿದ್ದಾರೆ ಹಾಗೂ ಯಾರ ಜತೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದರ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ ಎಂದು ಸಚಿವರು ಹೇಳಿದ್ದಾರೆ.

Join Whatsapp
Exit mobile version