ಫೆಬ್ರುವರಿ 14 ರಿಂದ 25ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ: ಮುಖ್ಯಮಂತ್ರಿ ಬೊಮ್ಮಾಯಿ

Prasthutha: January 27, 2022

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ಫೆಬ್ರುವರಿ 14 ರಿಂದ 25ರವರೆಗೆ ಜಂಟಿ ಅಧಿವೇಶನ ಹಾಗೂ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟದ ಸಭೆಯ ನಂತರ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ. ಕೋವಿಡ್ ಸ್ಥಿತಿಗತಿ, ಕೋವಿಡ್ ನಿರ್ವಹಣೆ, ಶಾಲಾ-ಕಾಲೇಜು ಹಾಗೂ ಸಂಘ ಸಮಸ್ಥೆಗಳ ಮನವಿಗಳನ್ನು ತಜ್ಞರ ಸಮಿತಿಯ ಮುಂದೆ ಇರಿಸಲಾಗಿದ್ದು, ತಜ್ಞರ ವರದಿ ಬಂದ ನಂತರ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆ:

ಬಿಬಿಎಂಪಿ ಚುನಾವಣೆಯ ಬಗ್ಗೆ ಚರ್ಚಿಸಲಾಗಿದ್ದು, ಬೆಂಗಳೂರಿನ ಸಚಿವರೊಂದಿಗೆ ಇತರ ಜಿಲ್ಲೆಗಳ ಸಚಿವರನ್ನೂ ನಿಯೋಜಿಸಿ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಇದಕ್ಕೂ ಮೊದಲು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ನಮ್ಮದು ಸ್ಪಂದನಾಶೀಲವಾಗಿರುವ ಸರ್ಕಾರ. ಸಮಸ್ಯೆಗಳು ಎದುರಾದಂತೆ ಸೂಕ್ತವಾಗಿ ಸ್ಪಂದಿಸುತ್ತಾ ಬಂದಿದ್ದೇವೆ. ನಿರಂತರವಾಗಿ ಜನರಿಗೆ ಸಹಾಯ ಮಾಡುವ ಜನಕಲ್ಯಾಣ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಸ್ಪಂದನಾಶೀಲ ಸರ್ಕಾರ

ನಮ್ಮದು ಸ್ಪಂದನಾಶೀಲ ಸರ್ಕಾರ. ಅದಕ್ಕೆ 100 ದಿನ, 6 ತಿಂಗಳು ಅಥವಾ ಯಾವುದೇ ಸಂದರ್ಭದ ಅಗತ್ಯವಿಲ್ಲ. ಜೋಳ ಖರೀದಿಗೆ ಅವಕಾಶ ಮಾಡಿಕೊಡಬೇಕೆಂಬ ಬೇಡಿಕೆ ಬಂದಿತ್ತು, ಅದಕ್ಕೆ ಅನುವು ಮಾಡಿಕೊಡಲಾಗಿದೆ. ಅಂತೆಯೇ ರಾಗಿ ಖರೀದಿಯನ್ನೂ ಮುಂದುವರೆಸಬೇಕು ಎಂಬ ಬೇಡಿಕೆ ಇದೆ. ಅದನ್ನು ಕೂಡ ಸಚಿವ ಸಂಪುಟದ ಉಪಸಮಿತಿಯ ಮುಂದಿಟ್ಟು ರೈತರಿಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುವುದು. ಹೀಗೆ ಸಮಸ್ಯೆಗಳಿಗೆ ಎದುರಾದಂತೆ ಅವುಗಳಿಗೆ ಕೂಡಲೇ ಸ್ಪಂದಿಸಲಾಗುತ್ತಿದೆ. ಅದಕ್ಕೆ ಯಾವುದೇ ಸಂದರ್ಭ ಒದಗಿಬರಬೇಕಿಲ್ಲ ಎಂದರು.

ಹುಟ್ಟುಹಬ್ಬ ಆಚರಿಸುವುದಿಲ್ಲ: ಜನವರಿ 28 ರಂದು ಮುಖ್ಯಮಂತ್ರಿಗಳ ಮುಖ್ಯಮಂತ್ರಿಗಳ ಹುಟ್ಟುಹಬ್ಬ ಯಾವ ರೀತಿ ಆಚರಿಸಲಾಗುವುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ‘ಹುಟ್ಟುಹಬ್ಬವನ್ನು ಎಂದೂ ಆಚರಿಸಿಕೊಂಡಿಲ್ಲ. ಹಾಗಾಗಿ ನಾಳೆಯೂ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ’ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರದ ಕೆಲಸಗಳ ಪಕ್ಷಿನೋಟ ಒದಗಿಸುವ ಪುಸ್ತಕ: ಸರ್ಕಾರಕ್ಕೆ 6 ತಿಂಗಳು ತುಂಬುತ್ತಿರುವ ಸಂದರ್ಭದಲ್ಲಿ ಈ ಅವಧಿಯಲ್ಲಿ ಆಗಿರುವ ಕೆಲಸಗಳ ಬಗ್ಗೆ ಮತ್ತು ಅವು ಯಾವ ರೀತಿ ಜನೋಪಯೋಗಿ ಆಗಿವೆ ಎಂಬುದರ ಪಕ್ಷಿನೋಟವನ್ನು ಪುಸ್ತಕ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೋವಿಡ್ ನಿರ್ವಹಣೆ: ಸಚಿವ ಸಂಪುಟ ಸಭೆ ಅಜೆಂಡಾ ಪ್ರಕಾರ ನಡೆಯಲಿದ್ದು, ಇತರೆ ವಿಷಯಗಳಲ್ಲಿ ಹಲವಾರು ವಿಷಯಗಳನ್ನು ಚರ್ಚೆ ಮಾಡಲಿದ್ದು, ಕೋವಿಡ್ ನಿರ್ವಹಣೆ ಯಾವರೀತಿಯಾಗಬೇಕೆದು ತಜ್ಞರ ಸಮಿತಿಗೆ ವರದಿ ನೀಡಲು ಸೂಚಿಸಲಾಗಿದೆ. ವರದಿಬಂದ ಕೂಡಲೇ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!