Home ಟಾಪ್ ಸುದ್ದಿಗಳು ಪ್ರಜ್ವಲ್ ರೇವಣ್ಣ ಪ್ರಕರಣ: ಸಿದ್ದರಾಮಯ್ಯ, ರೇವಣ್ಣ ಮಧ್ಯೆ ಒಪ್ಪಂದ; ಪ್ರಲ್ಹಾದ್ ಜೋಶಿ

ಪ್ರಜ್ವಲ್ ರೇವಣ್ಣ ಪ್ರಕರಣ: ಸಿದ್ದರಾಮಯ್ಯ, ರೇವಣ್ಣ ಮಧ್ಯೆ ಒಪ್ಪಂದ; ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕ ಹೆಚ್​ ಡಿ ರೇವಣ್ಣ ಹಾಗೂ ಸಿಎಂ ಸಿದ್ದರಾಮಯ್ಯ ಜತೆ ಒಪ್ಪಂದವಾಗಿದೆ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಕೇಳಿಬಂದಕೂಡಲೇ ಯಾಕೆ ಪ್ರಜ್ವಲ್ ವಿರುದ್ಧ ರಾಜ್ಯ ಸರ್ಕಾರ ಎಫ್​ಐಆರ್ ದಾಖಲಿಸಲಿಲ್ಲ? ಪ್ರಜ್ವಲ್​​ ರೇವಣ್ಣರನ್ನು ಓಡಿ ಹೋಗುವುದಕ್ಕೆ ಯಾಕೆ ಬಿಟ್ಟರು? ರಾಜ್ಯದ ಪೊಲೀಸರು ಪ್ರಜ್ವಲ್​ರನ್ನು ಬಂಧಿಸಬೇಕಿತ್ತು. ಇಲ್ಲಿ ದೂರು ದಾಖಲಾದರೆ ಕೇಂದ್ರ ಸರ್ಕಾರಕ್ಕೆ ಏನಾದರೂ ಕನಸು ಬೀಳುತ್ತದೆಯೇ ಎಂದು ಜೋಶಿ ಪ್ರಶ್ನಿಸಿದರು.

Join Whatsapp
Exit mobile version