ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸ್ಪರ್ಧಿಸಬಾರದು ಎಂದು ಆಗ್ರಹಿಸಿ, ಧಾರವಾಡದ ಅಭ್ಯರ್ಥಿ ಬದಲಾವಣೆಗೆ ಗಡುವು ನೀಡಿದ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಯ ಬೆನ್ನಿಗೇ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆದ ಬಿ.ಎಸ್. ಯಡಿಯೂರಪ್ಪ, ಜೋಶಿ ಅವರನ್ನು ಯಾವುದೇ ಕಾರಣಕ್ಕೂ ಬದಲಾಯಿಸಲ್ಲ ಎಂದು ಹೇಳಿದ್ದಾರೆ.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೋಶಿ ಅವರು ಎಸ್.ಸಿ, ಎಸ್.ಟಿ, ಹಿಂದುಳಿದ ವರ್ಗ, ವೀರಶೈವ ಲಿಂಗಾಯತ, ಬ್ರಾಹ್ಮಣ ಎನ್ನುವ ಭೇದಭಾವ ಎನ್ನದೆ ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗುತ್ತಾರೆ. ಈ ಸಲವೂ ಅವರು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.
ದಿಂಗಾಲೇಶ್ವರ ಸ್ವಾಮೀಜಿ ಅವರ ಜೊತೆ ದೂರವಾಣಿ ಮೂಲಕ ಮಾತನಾಡುವೆ. ಅವರಿಗಾಗಿರುವ ತಪ್ಪು ಗ್ರಹಿಕೆಯನ್ನು ಹೋಗಲಾಡಿಸುವೆ. ಮಠಾಧೀಶರು ಎಲ್ಲ ಕಾಲಕ್ಕೂ ನಮ್ಮ ಜೊತೆ ಇದ್ದಾರೆ ಎಂದರು.